ನಿಷೇಧಕ್ಕೊಳಗಾಗಿದ್ದರೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತನ್ನ ಚಟುವಟಿಕೆಯನ್ನು ನಿಲ್ಲಿಸಿಲ್ಲ. ಇದರ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೇರಳದ 56 ಕಡೆ ರಾಷ್ಟ್ರೀಯ ತನಿಖಾ ದಳ ಇಂದು ದಾಳಿ ನಡೆಸಿದೆ. PFIನ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಸಕ್ರಿಯರಾಗಿದ್ರು. ಭಯೋತ್ಪಾದಕ ಕೃತ್ಯಗಳ ಸಂಚು, ವಿದೇಶದಿಂದ ಹಣ ಸಂಗ್ರಹ ಆರೋಪದ ಮೇಲೆ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಜಿಲ್ಲೆಗಳಲ್ಲಿ ದಾಳಿ ನಡೆದಿದೆ. ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ನಿಷೇಧಿತ ಸಂಘಟನೆಯು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದೆ. ಅದರ ಮೂಲಕ ಹಣವನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದೆ. ಬೇರೆ ಹೆಸರಿನಲ್ಲಿ PFI ಅನ್ನು ಮರುಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ ಎಂಬುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ NIA ದಾಳಿ ನಡೆಸಿದೆ.