Select Your Language

Notifications

webdunia
webdunia
webdunia
webdunia

ನಾಗಮಂಗಲ ಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಕೈವಾಡ ಶಂಕೆ, ಎನ್‌ಐಎ ತನಿಖೆಗೆ ಆರ್‌. ಅಶೋಕ್ ಒತ್ತಾಯ

R Ashok

Sampriya

ಬೆಂಗಳೂರು , ಭಾನುವಾರ, 15 ಸೆಪ್ಟಂಬರ್ 2024 (13:45 IST)
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಸಂದೇಹವಿರುವುದರಿಂದ ಈ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ವಿಪಕ್ಷ ನಾಯಕ ಆರ್‌ ಅಶೋಕ್ ಒತ್ತಾಯಿಸಿದರು.

ನಾಗಮಂಗಲ ಗಲಭೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್‌ಐ, ಕೆಎಫ್‌ಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ,
ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ.

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್‌ಐಆರ್‌ ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವ ಜಿ ಪರಮೇಶ್ವರ್ ಅವರನ್ನ ಒತ್ತಾಯಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿಂದ್ದ ಹೊರಬಂದ ಮರುದಿನವೆ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಕೇಜ್ರಿವಾಲ್