Publish Date: Fri, 21 Apr 2023 (11:52 IST)
Updated Date: Fri, 21 Apr 2023 (11:54 IST)
ಬೆಳಗಾವಿ : ಕಾಂಗ್ರೆಸ್ ಕಾಲದಲ್ಲಿ ಪಿಎಫ್ಐ ಜಾಲ ದೇಶಾದ್ಯಂತ ವ್ಯಾಪಕವಾಗಿ ಹಬ್ಬಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಯಲ್ಲಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಲೈಕೆಗಾಗಿ ಕಾಂಗ್ರೆಸ್ ನಿರಂತರ ಕೆಲಸ ಮಾಡುತ್ತಿದೆ. ಓಲೈಕೆ ರಾಜಕೀಯ ಮಾಡುವುದು ಕಾಂಗ್ರೆಸ್ನ ಗುಣವಾಗಿದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸತತವಾಗಿ ಚುನಾವಣೆಗಳಲ್ಲಿ ಸೋಲುತ್ತ, ನಿರಂತರವಾಗಿ ಮುಳುಗುತ್ತಿರುವ ಪಕ್ಷವಾಗಿದೆ. ಆದರೆ ದೇಶಾದ್ಯಂತ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. ಉತ್ತರಾಖಂಡ್ ಹಾಗೂ ಗೋವಾ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಸಾಮಾನ್ಯ ಕಾರ್ಯಕರ್ತರು ಸಹ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಾರೆ ಎಂದಿದ್ದಾರೆ.