Publish Date: Thu, 20 Oct 2022 (15:27 IST)
Updated Date: Thu, 20 Oct 2022 (15:30 IST)
ಅಯೋಧ್ಯೆಯ ರಾಮಮಂದಿರ ಸ್ಫೋಟಿಸಲು PFI ಸಂಚು ರೂಪಿಸಿದ್ದ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಮಮಂದಿರದ ಮೇಲೆ ಬಾಂಬ್ ದಾಳಿಗೆ ಷಡ್ಯಂತ್ರ ರೂಪಿಸಿದ್ದ PFI ಕಾರ್ಯಕರ್ತರು ಅದೇ ಜಾಗದಲ್ಲಿ ನಂತರ ಮಸೀದಿ ನಿರ್ಮಿಸುವ ಆಲೋಚನೆ ಹೊಂದಿದ್ದರು ಎಂದು ಹೇಳಲಾಗಿದೆ. ಇತ್ತೀಚೆಗೆ ದೇಶವ್ಯಾಪಿ PFI ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದ ವೇಳೆ ಮಹಾರಾಷ್ಟ್ರದಲ್ಲಿ 35 ಮಂದಿಯನ್ನು ಬಂಧಿಸಲಾಗಿತ್ತು. ಮಾಲೆಂಗಾವ್, ಪುಣೆ ಸೇರಿ ಹಲವೆಡೆ ದಾಳಿ ನಡೆದಿತ್ತು. ವಿಚಾರಣೆ ವೇಳೆ ಆರೋಪಿಗಳು ರಾಮಮಂದಿರ ಸ್ಫೋಟಿಸುವ ಸಂಚಿನ ಬಗ್ಗೆ ಬಾಯ್ಬಿಟ್ಟಿದ್ದಾರೆ. PFI ಸದಸ್ಯರ ವಾಟ್ಸಾಪ್ ಗುಂಪಿನ ಅಡ್ಮಿನ್ ಪಾಕಿಸ್ತಾನ ಮೂಲದ ವ್ಯಕ್ತಿ ಎಂದು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾಟ್ಸ್ಯಾಪ್ ಗ್ರೂಪ್ ಅನ್ನು ದೇಶವಿರೋಧಿ ಚಟುವಟಿಕೆಯ ಸಂಚು ರೂಪಿಸಲು ಸಂಘಟಿಸಲಾಗಿತ್ತು ಎಂದು ಆರೋಪಿಸಲಾಗಿದೆ