ಬೆಂಗಳೂರು: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ಆದೇಶವನ್ನ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಮಾಡುವ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ.
ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ಭಾರೀ ಹಿನ್ನೆಡೆಯಾಗಿದೆ. 2018-19 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಿದ್ದಾಗ ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಅಯುಕ್ತರಾಗಿದ್ದರು. ಈ ವೇಳೆ ಎಡಿಜಿಪಿ ಭಾಸ್ಕರ್ ರಾವ್ ಫೋನ್ ಟ್ಯಾಪಿಂಗ್ ಮಾಡಿದ್ದ ಆರೋಪ ಕೇಳಿಬಂದಿತ್ತು.
ಈ ಪ್ರಕರಣ ಸಂಬಂಧ ಸಿಬಿಐ ತನಿಖೆಗಾಗಿ 2024 ರಲ್ಲಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿತ್ತು.
ಕಳೆದ ಮೇ ತಿಂಗಳಲ್ಲಿ ರಾಜ್ಯ ಸರ್ಕಾರ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣವನ್ನ ಇಲಾಖಾ ತನಿಖೆಗೆ ಆದೇಶಿಸಿತ್ತು.
ಸರ್ಕಾರದ ನಡೆ ಪ್ರಶ್ನಿಸಿ ಅಲೋಕ್ ಕುಮಾರ್ ಸಿಎಟಿ ಮೊರೆ ಹೋಗಿದ್ದರು.