Webdunia - Bharat's app for daily news and videos

Install App

ದುನಿಯಾ ವಿಜಿ ವಿರುದ್ಧ ಕೇಸ್ ದಾಖಲು, ಅರೆಸ್ಟ್ ಆಗ್ತಾರಾ?

Webdunia
ಮಂಗಳವಾರ, 15 ನವೆಂಬರ್ 2016 (14:58 IST)
ಸ್ನೇಹಿತ ಶಂಕರ್ ಕೌಟುಂಬಿಕ ವಿಚಾರದಲ್ಲಿ ಮೂಗು ತೂರಿಸಿದ್ದಲ್ಲದೆ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ದುನಿಯಾ ವಿಜಿ ವಿರುದ್ಧ ಪ್ರಕರಣ ದಾಖಲಾಗಿದೆ. 
 
ದುನಿಯಾ ವಿಜಿ ವಿರುದ್ಧ ಐಪಿಸಿ ಸೆಕ್ಷೆನ್ 324 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಶರಣಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 
 
ಮಾಸ್ತಿ ಗುಡಿ ದುರಂತ ವಿವಾದ ಮಾಸುವ ಮೊದಲೇ ದುನಿಯಾ ವಿಜಿ ಮತ್ತೊಂದು ವಿವಾದಲ್ಲಿ ಸಿಲುಕಿದ್ದು, ಸ್ನೇಹಿತ ಶಂಕರ್ ಕೌಟುಂಬಿಕ ವಿಚಾರದಲ್ಲಿ ಮೂಗು ತೂರಿಸಿದ್ದಲ್ಲದೆ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
 
ಶಂಕರ್ ಹಾಗೂ ದುನಿಯಾ ವಿಜಿ ಸ್ನೇಹಿತರಾಗಿದ್ದು, ಅವರ ಪತ್ನಿ ಮಾನಸಾ ಅವರನ್ನು ಕರೆತರಲು ಪೋಷಕರು ಬಂದಾಗ ಎರಡೂ ಕುಟುಂಬದವರ ನಡುವೆ ವಾದ ವಿವಾದವಾಗಿದೆ. ಈ ಸಂದರ್ಭದಲ್ಲಿ ಸ್ನೇಹಿತರು ಕರೆ ಮಾಡಿ ದುನಿಯಾ ವಿಜಿ ಅವರನ್ನು ಸ್ಥಳಕ್ಕೆ ಕರೆಸಿದ್ದು, ಅವರೂ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದರು.
 
ಈ ಸಂದರ್ಭದಲ್ಲಿ ದುನಿಯಾ ವಿಜಿ ಮಾನಸಾ ತಂದೆ ಜಯರಾಂ ಕೆನ್ನೆಗೆ ಹೊಡೆದಿದ್ದಲ್ಲದೆ, ಎದೆಗೆ ಒದ್ದಿದ್ದಾರೆ. ಇದರಿಂದಾಗಿ ಅವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಮಾನಸಾ ಮತ್ತು ಶಂಕರ್ ನಡುವೆ ವೈವಾಹಿಕ ಜೀವನದಲ್ಲಿ ಮನಸ್ತಾಪವಿತ್ತು. ಮಾನಸಾ ಅವರಿಗೆ ಹೆತ್ತವರ ಜತೆ ಸಂಪರ್ಕಿಸಲೂ ಶಂಕರ್ ಬಿಡುತ್ತಿರಲಿಲ್ಲ ಎನ್ನುವುದು ಮಾನಸಾ ಪೋಷಕರ ಆರೋಪವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments