Publish Date: Tue, 15 Oct 2019 (15:45 IST)
Updated Date: Tue, 15 Oct 2019 (15:49 IST)
ರಾಜ್ಯದ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಸ್ಪರ್ಧೆಯಲ್ಲಿ ದೈಹಿಕ ಸಾಮರ್ಥ್ಯವನ್ನು ಒರೆಗೆ ಹಚ್ಚಲಾಯಿತು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವತಿಯಿಂದ 2019-20 ನೇ ಸಾಲಿನ ಕಾಲೇಜು ವಿಧ್ಯಾರ್ಥಿಗಳ ವೇಟ್ ಲಿಫ್ಟಿಂಗ್ ಸ್ಪರ್ಧೆ ನಡೆಯಿತು. ಬೆಂಗಳೂರು ಹೊರವಲಯದ ಆನೇಕಲ್ ನ ಸಾಯಿರಾಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಕರ್ನಾಟಕದ ಹಲವು ಕಾಲೇಜು ವಿಧ್ಯಾರ್ಥಿಗಳು ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದ್ರು.
ಕಾಲೇಜು ವಿಧ್ಯಾರ್ಥಿಗಳಿಗೆ ವೇಟ್ ಲಿಫ್ಟಿಂಗ್ ಸ್ಪರ್ಧೆ ಏರ್ಪಡಿಸಿದ್ದು, ಹಲವು ಕಾಲೇಜಿನ 150 ವಿಧ್ಯಾರ್ಥಿಗಳು ಹಾಗೂ 50 ವಿದ್ಯಾರ್ಥಿನಿಯರು ಭಾಗವಹಿಸಿದ್ರು. ಅತ್ಯುತ್ತಮ ಕ್ರೀಡಾಪಟುವಿಗೆ ಯೂನಿವರ್ಸಿಟಿ ವತಿಯಿಂದ ಬಹುಮಾನಗಳನ್ನು ಘೋಷಣೆ ಮಾಡಲಾಗಿದೆ.