Select Your Language

Notifications

webdunia
webdunia
webdunia
webdunia

ಪಿಕಪ್ ವಾಹನ ಡಿಕ್ಕಿ: ಲಾರಿ ರಿಪೇರಿ ಮಾಡುತ್ತಿದ್ದ ಮೂವರು ಮೆಕಾನಿಕ್ ಗಳು ಸಾವು

mangalore
bengaluru , ಸೋಮವಾರ, 30 ಆಗಸ್ಟ್ 2021 (19:37 IST)
ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂ
ತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದವರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಷಾರಾಮಿ ಕಾರಿನಲ್ಲಿ ಬಂದು ಕಳ್ಳತನ; ಕದ್ದ ಚಿನ್ನ ಪತ್ನಿಯರ ಹೆಸರಿನಲ್ಲಿ ಅಡವಿಡುತ್ತಿದ್ದ ಕಳ್ಳ!