8 ಕೆಜಿ ತೂಕದ ಹಂದಿ ಚಿಪ್ಪುಗಳು ಪೊಲೀಸ್ ವಶ, ಬಳ್ಳಾರಿ ಮೂಲದ ಇಬ್ಬರ ಬಂಧನ

Webdunia
ಶುಕ್ರವಾರ, 22 ಅಕ್ಟೋಬರ್ 2021 (18:48 IST)
ಬೆಂಗಳೂರು: ಹಂದಿಯ ಚಿಪ್ಪುಗಳನ್ನು ಮಾರಾಟ ಬಂದಿದ್ದ ಬಳ್ಳಾರಿ ಮೂಲದ ಇಬ್ಬರು ಆರೋಪಿಗಳನ್ನು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿ 8 ಕೆ.ಜಿ  200 ಗ್ರಾಂ ತೂಕದ ಹಂದಿ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ. 
 
ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಇಬ್ರಾಹಾಂ ಮತ್ತು ಮರಿಸ್ವಾಮಿ ಬಂಧಿತ ಆರೋಪಿಗಳು. ಇಬ್ಬರು ಕಾನೂನು ಬಾಹಿರವಾಗಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಯ ಮೇಲ್ಮೈ ಚಿಪ್ಪುಗಳನ್ನು ಸಂಗ್ರಹಿಸ್ಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮಾಹಿತಿ ಪೊಲೀಸ್ ಇಲಾಖೆಗೆ  ದೊರೆತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 
ಕಾರ್ಯಪ್ರವೃತ್ತರಾದ ಸಿಬ್ಬಂದಿ  ದಾಳಿ ನೆಡಸಿ ಇಬ್ಬರನ್ನು ಬಂಧಿಸಿದ್ದಾರೆ . ಹಂದಿಯ ಚಿಪ್ಪುಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 
 
ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ: 
 
ಪ್ರಕರಣದ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
vanya

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments