ಹುಬ್ಬಳ್ಳಿ: ಪತ್ನಿಯ ಕಿರುಕುಳಕ್ಕೆ ಬೇಸತ್ತ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಅತುಲ್ ಕುಲಕರ್ಣಿ ಎಂದು ಗುರುತಿಸಲಾಗಿದೆ.
ಈಚೆಗೆ ಪತ್ನಿಯ ಕಿರುಕುಳಕ್ಕೆ ಪತಿ ಸಾವನ್ನಪ್ಪುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಚೆಗೆ ಅತುಲ್ ಸುಭಾಷ್ ಸಾವು ಪ್ರಕರಣ ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಇದೀಗ ಅದರ ಬೆನ್ನಲ್ಲೇ ಅದೇ ರೀತಿತಿಯ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಡೆತ್‌ನೋಟ್‌ನಲ್ಲಿ ಅವರ ತಂದೆಯನ್ನು ನೆನಪಿಸಿಕೊಂಡಿರುವ ಪೀಟರ್, ಡ್ಯಾಡಿ ಐ ಆ್ಯಮ್ ಸಾರಿ.. ಎಂದು ಬರೆದಿದ್ದಾರೆ. ಹೆಂಡತಿ ಪಿಂಕಿ ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆಥ್ (ನನ್ನ ಹೆಂಡತಿ ಪಿಂಕಿ ನನ್ನನ್ನು ಕೊಲ್ಲುತ್ತಿದ್ದಾಳೆ, ಆಕೆ ನನ್ನ ಸಾವನ್ನು ನೋಡಬೇಕಂತೆ) ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡತಿದ್ದ ಪೀಟರ್ ಹಾಗೂ ಆತನ ಪತ್ನಿ ಪಿಂಕಿ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು.
ಇದೀಗ ಹೆಂಡತಿ ಟಾರ್ಚರ್‌ಗೆ ಸಾವನ್ನಪ್ಪಿರುವುದಾಗಿ ಡೆತ್ ನೋಟ್‌ನಲ್ಲಿ ಬರೆಯಲಾಗಿದೆ.