Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲೂ ಪಿಎಸ್ ಐ ನೇಮಕಾತಿ ಅಕ್ರಮ? 12 ಮಂದಿ ಅರೆಸ್ಟ್!

psi exam bengaluru police  ಪಿಎಸ್ ಐ ಪರೀಕ್ಷಾ ಅಕ್ರಮ ಬೆಂಗಳೂರು ಪೊಲೀಸ್
bengaluru , ಭಾನುವಾರ, 1 ಮೇ 2022 (15:20 IST)

ಪಿಎಸ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಬೆಂಗಳೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. 22 ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ 12 ಜನರ ಬಂಧಿಸಿದ್ದು, ಉಳಿದವರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬಂಧಿತ 12 ಮಂದಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನೂ ಸಹ ಸಿಐಡಿಗೆ ವರ್ಗಾಯಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿಂದು 3324 ಸೋಂಕು ಪತ್ತೆ: 40 ಮಂದಿಗೆ ಕೊರೊನಾಗೆ ಬಲಿ