Publish Date: Mon, 11 Nov 2019 (10:36 IST)
Updated Date: Mon, 11 Nov 2019 (10:39 IST)
ಬೆಂಗಳೂರು : ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ರಣ ತಂತ್ರ ರೂಪಿಸಲಾಗಿದೆ.
ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರಿಂದ ರಣತಂತ್ರ ರೂಪಿಸಲಾಗಿದ್ದು, ಪಕ್ಷಭೇದ ಮರೆತು ರಮೇಶ್ ಜಾರಕಿಹೊಳಿ ಸೋಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ತಂತ್ರ ರೂಪಿಸಿದ್ದು, ಆ ಮೂಲಕ ಗೋಕಾಕ್ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಅಶೋಕ್ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಬಗ್ಗೆ ನಿರ್ಧಾರ ಮಾಡಲಾಗಿದೆ.
ಈಗಾಗಲೇ ಅಶೋಕ್ ಪೂಜಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಈ ಹಿನ್ನಲೆಯಲ್ಲಿ ಅಶೋಕ್ ಪೂಜಾರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿ ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಕೈ ನಾಯಕರು ಹೊರಲಿದ್ದು, ಇವರ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ ಎನ್ನಲಾಗಿದೆ.