ರಾಜ್ಯ ಸರ್ಕಾರವು ಮತ್ತೊಂದು ಮಹತ್ವಾಕಾಂಕ್ಷಿಯ ಯೋಜನೆಗೆ ತಯಾರಿ ನಡೆಸಿದೆ.. ಸರ್ಕಾರದಿಂದʻಗೃಹ ಆರೋಗ್ಯ ಯೋಜನೆʼ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.. ಈ ಯೋಜನೆ ಪ್ರಾಯೋಗಿಕ ಜಾರಿ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದಾರೆ..
ಇನ್ನು ಈ ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ ನಡೆಸಲು ಸಿದ್ದತೆ ನಡೆಸಲಾಗಿದೆ.. ವೈದ್ಯಕೀಯ ಸಿಬ್ಬಂದಿಗಳ ತಂಡವು ರಾಜ್ಯದ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಕೊಟ್ಟು ಜೊತೆಗೆ ಅಗತ್ಯ ಔಷಧಿಗಳನ್ನು ಉಚಿತವಾಗಿ ವಿತರಿಸಲು ಇಲಾಖೆ ಸಜ್ಜಾಗಿದೆ.. ಮೊದಲ ಹಂತದಲ್ಲಿ 8 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದ್ದು, ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲು ಆರೋಗ್ಯ ಇಲಾಖೆ ಪ್ಲಾನ್ ಮಾಡಿಕೊಂಡಿದೆ.. ಅದಷ್ಟೂ ಬೇಗ ಯೋಜನೆ ಜಾರಿಗೆ ತರಲು ಆರೋಗ್ಯ ಸಚಿವರು ಮುಂದಾಗಿದ್ದು,
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ..