ಪ್ಲಾಟ್‌ಫಾರಂ ಸ್ಕ್ರೀನ್‌ ಡೋರ್‌ ಅಳವಡಿಕೆಗೆ ಪ್ಲ್ಯಾನ್

Webdunia
ಭಾನುವಾರ, 6 ಆಗಸ್ಟ್ 2023 (13:44 IST)
ನಮ್ಮ ಮೆಟ್ರೋ ದಿನ ಕಳೆದಂತೆ ಹೆಚ್ಚೆಚ್ಚು ಜನಪ್ರಿಯತೆ ಗಳಿಸುತ್ತಿದೆ. ಈ ಬೆನ್ನಲ್ಲೇ ಪ್ರಯಾಣಿಕರ ಸಂಖ್ಯೆ ಕೂಡ ದುಪ್ಪಟ್ಟಾಗಿದೆ. ಹೀಗಿರುವಾಗಲೇ ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆಗೆ ಭರ್ಜರಿ ಪ್ಲ್ಯಾನ್ ಮಾಡಿದೆ. ಇದೇ ಮೊದಲ ಬಾರಿಗೆ ಮೆಟ್ರೊ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್‌ ಡೋರ್‌ ಅಳವಡಿಕೆಗೆ ಮುಂದಾಗಿದೆ. ಇನ್ಫೋಸಿಸ್‌ ಫೌಂಡೇಶನ್‌ ಅನುದಾನದೊಂದಿಗೆ ನಿರ್ಮಾಣ ಮಾಡಲಾಗುತ್ತಿರುವ ಎಲೆಕ್ಟ್ರಾನಿಕ್ಸ್‌ ಸಿಟಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿ ಈ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಈ ನಿಲ್ದಾಣ ಆರ್‌.ವಿ ರಸ್ತೆ – ಬೊಮ್ಮಸಂದ್ರ ಹಳದಿ ಮಾರ್ಗದ ಭಾಗವಾಗಿದ್ದು, ವರ್ಷಾಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ. ಇನ್ನು, ಬೆಂಗಳೂರಿನಲ್ಲಿ 63‌ ಮೆಟ್ರೋ ನಿಲ್ದಾಣಗಳಿವೆ. ನಮ್ಮ ಮೆಟ್ರೋ 70 ಕಿಲೋ ಮೀಟರ್‌ಗಳಷ್ಟು ಕಾರ್ಯಾಚರಣೆ ಜಾಲವನ್ನು ಹೊಂದಿದೆ. ಅವುಗಳಲ್ಲಿ ಯಾವುದೇ ಪಿಎಸ್‌ಡಿ ವ್ಯವಸ್ಥೆ ಇಲ್ಲ. ಹೀಗಾಗಿ 135 ಕೋಟಿ ರೂಪಾಯಿ ವೆಚ್ಚದಲ್ಲಿ ವಾಕ್‌ವೇ ನಿಲ್ದಾಣ ಇನ್ಫೋಸಿಸ್‌ ಕ್ಯಾಂಪಸ್‌ನೊಂದಿಗೆ ಸಂಪರ್ಕಿಸುತ್ತದೆ. ಜತೆಗೆ ವಾಣಿಜ್ಯ ಚಟುವಟಿಕೆಗಳಿಗಾಗಿ 3 ಸಾವಿರ ಚದರ ಅಡಿ ಜಾಗ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನಿಯರ ಮೇಲಿರುವ ಅನುಕಂಪ ಬಾಂಗ್ಲಾದೇಶ ಹಿಂದೂಗಳ ಮೇಲೆ ಯಾಕಿಲ್ಲ: ನೆಟ್ಟಿಗರ ಆಕ್ರೋಶ

ಹಿಂದೂ ಮಹಿಳೆಯ ರೇಪ್ ಮಾಡಿ ಮರಕ್ಕೆ ಕಟ್ಟಿ ಕೂದಲು ಕತ್ತರಿಸಿದ ಬಾಂಗ್ಲಾದೇಶ ರಕ್ಕಸರು

ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಇನ್ನಿಲ್ಲ

ವಿ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು: ಇದೇನು ಗೂಂಡಾ ಸಂಸ್ಕೃತಿ ಬಿಜೆಪಿ ಆಕ್ರೋಶ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments