ಬೆಂಗಳೂರು-ಉತ್ತಮ ರಾಜಕಾರಣಿಯಾಗಲು ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ ಇದೆ ಎಂದು ಸ್ಪೀಕರ್ ಖಾದರ್ ತಿಳಿಸಿದರು.ವಿಕಾಸ ಸೌಧದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಕೀಲರು, ವೈದ್ಯರು, ಪತ್ರಕರ್ತರು ಸೇರಿದಂತೆ ಇತರೆ ಹಲವು ಕ್ಷೇತ್ರಗಳಿಗೆ ಕಾಲೇಜು ಹಾಗು ವಿಶ್ವವಿದ್ಯಾಲಯಗಳಿವೆ. ಆದರೆ, ಉತ್ತಮ ರಾಜಕಾರಣಿಯಾಗಲು ಯಾವುದೇ ಸಂಸ್ಥೆಗಳಿಲ್ಲ. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ರಾಜಕೀಯ ತರಬೇತಿ ಕೇಂದ್ರ ಪ್ರಾರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದರು.
ವಿವಿಧ ಕ್ಷೇತ್ರಗಳಂತೆ ರಾಜಕೀಯ ಕ್ಷೇತ್ರದಲ್ಲಿ ವ್ಯಾಸಂಗ ಮಾಡಲು ಯಾವುದೇ ರೀತಿಯಾದಂತಹ ಸಂಸ್ಥೆಗಳಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ರಾಜಕೀಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು.
ವೈದ್ಯಕೀಯ, ಎಂಜಿನಿಯರಿಂಗ್, ಕಾನೂನು ಸೇರಿದಂತೆ ಎಲ್ಲ ವಿಷಯಗಳಿಗೂ ಕಾಲೇಜು, ವಿಶ್ವವಿದ್ಯಾನಿಲಯಗಳು ಇವೆ. ಆದರೆ, ಉತ್ತಮ ರಾಜಕಾರಣಿಗಳಾಗಬೇಕು ಎಂಬ ಆಸಕ್ತಿ ಇಟ್ಟುಕೊಂಡವರಿಗೆ ಪ್ರತ್ಯೇಕ ಶಿಕ್ಷಣದ ವ್ಯವಸ್ಥೆ ಇಲ್ಲ. ಹೀಗಾಗಿ ರಾಜಕೀಯ ತರಬೇತಿ ನೀಡಲು ಸ್ಕೂಲ್ ಆಫ್ ಗವರ್ನೆನ್ಸ್ ಆರಂಭಿಸಬೇಕು ಎಂದು ವಿಧಾನಮಂಡಲದ ಉಭಯ ಸದನಗಳ ಮುಖ್ಯಸ್ಥರೂ ಚಿಂತನೆ ನಡೆಸಿದ್ದೇವೆ ಎಂದರು.