Select Your Language

Notifications

webdunia
webdunia
webdunia
webdunia

ಸಮೀಕ್ಷೆಗಾಗಿ ಮಕ್ಕಳ ಭವಿಷ್ಯದ ಜತೆ ಆಟವಾಡ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ ಕಿಡಿ

Nikhil Kumaraswamy

Sampriya

ಬೆಂಗಳೂರು , ಬುಧವಾರ, 8 ಅಕ್ಟೋಬರ್ 2025 (15:42 IST)
Photo Credit X
ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮುಗಿಯದ ಹಿನ್ನೆಲೆ ದಸರಾ ರಜೆಯನ್ನು ವಿಸ್ತರಣೆ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. 

ಈ ಸಂಬಂಧ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ. ಪೂರ್ವ ತಯಾರಿ ಇಲ್ಲದೆ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ. 

ಈಗ ಸಮೀಕ್ಷೆಗಾಗಿ ಶಾಲಾ ಮಕ್ಕಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟವಾಡುತ್ತಿದ್ದು,ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ ಎಂಬುದು ಇದರಿಂದ ಸ್ಪಷ್ಟವಾಗಿದೆ.

2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲೇ ಸ್ಪಷ್ಟವಾಗಿತ್ತು.

ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ಮತ್ತೆ ತೆರೆಯುತ್ತವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ಶಾಲೆಗಳಿಂದ ದೂರವಿರುತ್ತಾರೆ, ಆದರೆ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ - ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ.

ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು.

ಇವರ ರಾಜಕೀಯದ ತೆವಲಿಗೋಸ್ಕರ ಸಾರ್ವಜನಿಕರ ತೆರಿಗೆ ಹಣವನ್ನು ವ್ಯರ್ಥ ಮಾಡುವ ಜೊತೆಗೆ  ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೂಡ ಅಡ್ಡಿಪಡಿಸುತ್ತಿದೆ. ಸರ್ಕಾರದ ಈ ನಿಲುವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ