ಬೆಂಗಳೂರು: ಬಿಜೆಪಿ ಶಾಸಕರು, ಮುಖಂಡರನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಸಂಚು ರೂಪಿಸಿರುವ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್ ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ನಮ್ಮ ಪಕ್ಷದ ಶಾಸಕರಾದ ಶ್ರೀ ಬಸವರಾಜ್ ಮತ್ತಿಮಡು, ಬಿಜೆಪಿ ನಾಯಕರಾದ ಶ್ರೀ ಚಂದು ಪಾಟೀಲ್, ಶ್ರೀ ಮಣಿಕಂಠ ರಾಥೋಡ್ ಹಾಗೂ ಶ್ರೀ ಶ್ರೀ ಶ್ರೀ ಆಂದೋಲ ಸ್ವಾಮೀಜಿಯವರನ್ನು ಹತ್ಯೆ ಮಾಡಲು ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್ ಗೆ ಸುಪಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ ಬಹಿರಂಗವಾಗಿದೆ.
ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸುತ್ತೇನೆ.