ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

Krishnaveni K
ಶನಿವಾರ, 1 ನವೆಂಬರ್ 2025 (10:05 IST)
ನವದೆಹಲಿ: ಇಂದು ರಾಜ್ಯೋತ್ಸವ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಕನ್ನಡ ರಾಜ್ಯೋತ್ಸವ ನಿಮಿತ್ತ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಗೃಹಸಚಿವ ಅಮಿತ್ ಶಾ ‘ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ’ ಎಂದು ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments