ಸೆಪ್ಟೆಂಬರ್ 7 ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಗುರುವಾರ, 5 ಸೆಪ್ಟಂಬರ್ 2019 (11:14 IST)
ಬೆಂಗಳೂರು : ಸೆಪ್ಟೆಂಬರ್ 7ರಂದು ಚಂದ್ರಯಾನ-2 ಲ್ಯಾಂಡ್ ಆಗುತ್ತಿರುವ ಹಿನ್ನಲೆಯಲ್ಲಿ ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.ಸೆಪ್ಟೆಂಬರ್ 7 ರಂದು ಬೆಳಗ್ಗೆ 1 ಗಂಟೆ 55 ನಿಮಿಷಕ್ಕೆ ಚಂದ್ರಯಾನ-2ನ ‘ಪ್ರಗ್ಯಾನ್’ ರೋವರ್ ಮತ್ತು ‘ವಿಕ್ರಮ್’ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿವೆ. ಈ ಹಿನ್ನಲೆಯಲ್ಲಿ ಅದರ ವೀಕ್ಷಣೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

 

ಬೆಂಗಳೂರಿನ ಇಸ್ರೋ ಕೇಂದ್ರ ಸಂಸ್ಥೆಯಲ್ಲಿ ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. ಇದರ ನೇರ ಪ್ರಸಾರವನ್ನು ನೋಡಲು ಪ್ರಧಾನಿ ನರೇಂದ್ರ ಮೋದಿ ರಾತ್ರಿ 9.30ಕ್ಕೆ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಮೋದಿ ಆಗಮಿಸಲಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಯುವಕ ಮಾಡಿದ್ದೇನು ಗೊತ್ತಾ?