Publish Date: Tue, 27 Feb 2018 (16:33 IST)
Updated Date: Tue, 27 Feb 2018 (16:36 IST)
ಹುಬ್ಬಳ್ಳಿ: ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರಕಿತು.
ಎಂದಿನಂತೆ ಎಲ್ಲಾ ನಾಯಕರು ಹೂ ಮತ್ತು ಪುಸ್ತಕದ ಜತೆಗೆ ಪ್ರಧಾನಿ ಮೋದಿಗೆ ಸ್ವಾಗತ ನೀಡಿದರು. ಆದರೆ ಕೆಲವ ಸ್ಥಳೀಯ ನಾಯಕರು ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಲು ಬಂದರು.
ಆದರೆ ಪ್ರಧಾನಿ ಮೋದಿ ಇದಕ್ಕೆ ಆಸ್ಪದ ಕೊಡಲಿಲ್ಲ. ಕಾಲಿಗೆ ಬೀಳುವ ಮೊದಲೇ ಕೈ ಹಿಡಿದು ತಡೆದ ಮೋದಿ, ಇದೆಲ್ಲಾ ಬೇಡ ಎಂದರು. ನಂತರ ಹೆಲಿಕಾಪ್ಟರ್ ಮೂಲಕ ದಾವಣಗೆರೆಯತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ