Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಹುಟ್ಟಿನಿಂದಲೂ ಕಾಂಗ್ರೆಸ್ ವಿರೋಧಿ: ಖರ್ಗೆ

ಪ್ರಧಾನಿ ಮೋದಿ ಹುಟ್ಟಿನಿಂದಲೂ ಕಾಂಗ್ರೆಸ್ ವಿರೋಧಿ: ಖರ್ಗೆ
ನಂಜನಗೂಡು , ಭಾನುವಾರ, 2 ಏಪ್ರಿಲ್ 2017 (17:21 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟಿನಿಂದಲೂ ಕಾಂಗ್ರೆಸ್ ವಿರೋಧಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. 
 
ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುವುದೇ ಕಾಯಕವಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರು ಉನ್ನತ ಸ್ಥಾನದಲ್ಲಿದ್ದಾರೆ ಎನ್ನುವುದನ್ನು ಮರೆಯಬಾರದು ಎಂದರು.
 
ರಾಜ್ಯ ಸರಕಾರದ ಅಭಿವೃದ್ಧಿ, ಜನಪರ ಯೋಜನೆಗಳನ್ನು ಸಹಿಸದ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದೆ ಎಂದು ಕಿಡಿಕಾರಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಯಾವ ರೀತಿ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದರು ಎನ್ನುವುದು ರಾಜ್ಯದ ಜನತೆ ಮರೆತಿಲ್ಲ. ಇಅವರ ಅವಧಿಯಲ್ಲಿ 15 ಬಿಜೆಪಿ ಮುಖಂಡರು ಜೈಲಿಗೆ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾದಲ್ಲೇ ಅತಿ ಉದ್ದದ ಸುರಂಗ ಮಾರ್ಗ ಉದ್ಧಾಟಿಸಿದ ಪ್ರಧಾನಿ ಮೋದಿ