Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದು, ಪಿಎಂ ಮೋದಿಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡ್ಲಿ: ಪೂಜಾರಿ

ಸಿಎಂ ಸಿದ್ದು, ಪಿಎಂ ಮೋದಿಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡ್ಲಿ: ಪೂಜಾರಿ
ಮಂಗಳೂರು , ಮಂಗಳವಾರ, 13 ಜೂನ್ 2017 (14:28 IST)
ಅನ್ನದಾತ ರೈತನೊಬ್ಬ ನಗ್ನವಾಗಿ ಪ್ರತಿಭಟನೆ ನಡೆಸಿ ಸಾಲ ಮನ್ನಾಗೆ ಗೋಗೆರೆಯುತ್ತಿರುವುದು ರಾಜ್ಯಕ್ಕೆ, ದೇಶಕ್ಕೆ ಅಪಮಾನದ ಸಂಗತಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಗುಡುಗಿದ್ದಾರೆ.
 
ಘಟನೆಗೆ ಸಂಬಂಧಿಸಿದಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
 
ದೇಶದ, ರಾಜ್ಯದ  ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿ ಎಂದರೆ ಕೇಂದ್ರದತ್ತ ಕೈ ತೋರಿಸುತ್ತಾರೆ. ಕೇಂದ್ರದವರು ರಾಜ್ಯದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ಅಡಳಿತ ನೋಡಿದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆಯೇ ಎನ್ನುವ ಆತಂಕ ನನ್ನನ್ನು ಕಾಡುತ್ತಿದೆ ಎಂದು ತಮ್ಮದೇ ಪಕ್ಷದ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಮ್ಮತಿ