ರಾಜ್ಯಸಭೆ ಚುನಾವಣೆ ಗೆಲುವು: ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಶ್ಲಾಘನೆ

Webdunia
ಶನಿವಾರ, 11 ಜೂನ್ 2022 (14:20 IST)
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.
"ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತಾಗಲಿ ಎಂದು  ಪ್ರಧಾನಿ ಮೋದಿಯವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿ, ಶ್ಲಾಘಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ                      ಶುಭಾಶಯ ಕೋರಿದರು. ನೀವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕವಾಗಿದೆ. ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಮುಖ್ಯ ಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ  ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಜಯಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ಖಾತ್ರಿ ಪಡಿಸಿದ್ದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments