Publish Date: Mon, 30 Oct 2017 (08:51 IST)
Updated Date: Mon, 30 Oct 2017 (08:54 IST)
ಬೆಂಗಳೂರು: ರಾಜ್ಯಕ್ಕೆ ಒಂದು ದಿನದ ಪ್ರವಾಸಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ನಿನ್ನೆ ಧರ್ಮಸ್ಥಳ ದೇವರ ದರ್ಶನ ಪಡೆದು, ನಂತರ ಬೆಂಗಳೂರಿನಲ್ಲಿ ಸೌಂದರ್ಯ ಲಹರಿ ಕಾರ್ಯಕ್ರಮದಲ್ಲೂ ರಾಜಕೀಯ ಬೆರೆಸಲಿಲ್ಲ.
ಆದರೆ ಬೀದರ್ ನಲ್ಲಿ ರೈಲ್ವೇ ಹಳಿ ಉದ್ಘಾಟಿಸಿದ ನಂತರ ದೆಹಲಿ ವಿಮಾನವೇರುವ ಮುನ್ನ ಕಾಂಗ್ರೆಸ್ ಗೆ ಟಾಂಗ್ ಕೊಟ್ಟು ತೆರಳಿದರು. ಕೇಂದ್ರ ಸರ್ಕಾರ ಭ್ರಷ್ಟಾಚಾರ ವಿರೋಧಿ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಬುದ್ಧಿಗೇಡಿಗಳಂತೆ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದರು.
ಗುಜರಾತ್ ನ ಪ್ರವಾಹದಿಂದ ನರಳುತ್ತಿದ್ದರೆ, ಅಲ್ಲಿನ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಮೋಜು ಮಾಡಿದರು. ಇದೇ ಸಂದರ್ಭದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದು ಕಂತೆ ಕಂತೆ ಹಣ ಸಿಕ್ಕಿತು ಎಂದು ಸಚಿವ ಡಿಕೆ ಶಿವಕುಮಾರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.
ಕರ್ನಾಟಕದ ಜನ ವಿಕಾಸ ಬಯಸಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ನನ್ನು ಅವರು ಶೀಘ್ರದಲ್ಲಿಯೇ ಕಿತ್ತೊಗೆಯುತ್ತಾರೆ. ವಿಕಾಸಕ್ಕಾಗಿ ಅವರು ಮುಂದಿನ ಚುನಾವಣೆವರೆಗೆ ಕಾಯಲು ಸಿದ್ಧರಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ