Publish Date: Sat, 25 Nov 2023 (17:00 IST)
Updated Date: Sat, 25 Nov 2023 (17:06 IST)
ಮೋದಿ ಅವರು ತೇಜಸ್ ಯುದ್ಧ ವಿಮಾನದ ಹಾರಾಟ ನಡೆಸಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ತೇಜಸ್‌ನಲ್ಲಿ ಯಶಸ್ವಿಯಾಗಿ ಪ್ರಯಾಣ ಪೂರೈಸಿದ್ದೇನೆ. ಈ ಒಂದು ಅನುಭವ ವಿಸ್ಮಯಕಾರಿಯಾಗಿ ಪುಷ್ಟೀಕರಿಸಿದೆ.
ನಾವು ಇಡೀ ಜಗತ್ತಿನಲ್ಲಿ ಯಾರಿಗೂ ಕಡಿಮೆ ಇಲ್ಲ. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸವನ್ನು ಗಣನೀಯವಾಗಿ ಹೆಚ್ವಿಸಿದೆ. ನಮ್ಮ ರಾಷ್ಟ್ರೀಯ ಸಾಮರ್ಥ್ಯದ ಬಗ್ಗೆ ಹೊಸ ಹೆಮ್ಮೆ, ಹೊಸ ಆಶಾವಾದ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.