ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

Krishnaveni K
ಶುಕ್ರವಾರ, 28 ನವೆಂಬರ್ 2025 (09:13 IST)
ಉಡುಪಿ: ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲು ಇಂದು ಪ್ರಧಾನಿ ಮೋದಿ ಕೃಷ್ಣ ನಗರಿ ಉಡುಪಿಗೆ ಭೇಟಿ ನೀಡುತ್ತಿದ್ದಾರೆ. ಅವರು ಇಂದು ಒಟ್ಟು ಎಷ್ಟು ಗಂಟೆ ಅಲ್ಲಿರಲಿದ್ದಾರೆ, ಏನೇನು ಮಾಡಲಿದ್ದಾರೆ ಇಲ್ಲಿದೆ ವಿವರ.

ಇದು ಎರಡನೇ ಬಾರಿಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆ ಹೊತ್ತಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ಅರ್ಧಗಂಟೆ ರೋಡ್ ಶೋ ನಡೆಸಲಿದ್ದಾರೆ. ಬನ್ನಂಜೆ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಕಲ್ಲಸಂಕ ಸರ್ಕಲ್ ವರೆಗೂ ರೋಡ್ ಶೋ ನಡೆಯಲಿದೆ.

11.30 ಕ್ಕೆ ಮೋದಿ ಉಡುಪಿ ಕೃಷ್ಣ ಮಠ ರಾಜಾಂಗಣಕ್ಕೆ ತಲುಪಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚವನ್ನು ಅನಾವರಣಗೊಳಿಸಲಿದ್ದಾರೆ. ಈ ವೇಳೆ ಕೃಷ್ಣ ದೇವರ ದರ್ಶನ ಪಡೆಯಲಿದ್ದಾರೆ.

ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ 15 ನೇ ಅಧ್ಯಾಯವನ್ನು ಪಠಿಸಲಿದ್ದಾರೆ. ಒಟ್ಟು 50 ನಿಮಿಷ ಪ್ರಧಾನಿ ಮೋದಿ ಕೃಷ್ಣ ಮಠದಲ್ಲಿರಲಿದ್ದಾರೆ. ಈ ವೇಳೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಬಳಿಕ ಅವರು ಗೋವಾಗೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಮಾರಿ ಪತ್ನಿಗೆ ಜೀವನಾಂಶ ನೀಡಿದ ಪತಿ ನೋವಿನ ಪ್ರತಿಕ್ರಿಯೆ ನೋಡಿ Video

ಸಿದ್ದರಾಮಣ್ಣ ಬೇಕಾದ್ದು ತಿನ್ನು, ಅದನ್ನು ಬೇಕಾದ್ರೂ ಕಟ್ ಮಾಡ್ಸು: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ Video

Karnataka Weather: ರಾಜ್ಯದಲ್ಲಿ ವಾರಂತ್ಯಕ್ಕೆ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments