ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಹೋಗಿ ಮದುವೆ ಊಟ ಮಾಡಿಕೊಂಡು ಬರುತ್ತಾರೆ ಇದಕ್ಕೆ ನಾವು ದೇಶದ್ರೋಹವೆನ್ನದೆ ಇನ್ನೇನನ್ನಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಳಸದ್ರೋಹ ಮಾಡುತ್ತಿರುವವರು ಬೆಜೆಪಿಯವರು. ಕಾಂಗ್ರೆಸ್‌ನಿಂದ ದೇಶದ್ರೋಹ ಎಂದು ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಶ್ಮೀರದಲ್ಲಿ ಪಾಕ್ ದ್ವಜ ಹಾರಾಡುತ್ತಿದ್ದರು, ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಹೋಗಿ ಮದುವೆ ಊಟ ಮಾಡಿಕೊಂಡು ಬರುತ್ತಾರೆ ಇದಕ್ಕೆ ದೇಶದ್ರೋಹವೆನ್ನದೆ ಇನ್ನೇನನ್ನಬೇಕು ಎಂದು ಲೇವಡಿ ಮಾಡದರು.
ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಚ್......
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿಪಿಪಿ ಕಾರ್ಯಕರ್ತರು ನಿಷೇಧಿತ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರಿಂದ ಅವರ ಮೇಲೆ ಲಾಠಿ ಚಾರ್ಚ್ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ