ಪ್ರಧಾನಿ ಮಧ್ಯಸ್ಥಿಕೆಯಿಂದ ಮಾತ್ರ ಕಾವೇರಿ, ಮಹದಾಯಿ ಇತ್ಯರ್ಥ: ಚೆನ್ನವೀರ ಕಣವಿ

Webdunia
ಗುರುವಾರ, 29 ಸೆಪ್ಟಂಬರ್ 2016 (12:47 IST)
ಕಾವೇರಿ ಹಾಗೂ ಮಹದಾಯಿ ಜಲ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ಪರಸ್ಪರ ಮಾತುಕತೆಯ ಮೂಲಕ ಸಮಸ್ಯಯನ್ನು ಇತ್ಯರ್ಥಗೊಳಿಸಬೇಕು ಎಂದು ನಾಡೋಜ ಚೆನ್ನವೀರ ಕಣವಿ ಹೇಳಿದ್ದಾರೆ.
 
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆಂದು ಮೈಸೂರು ಜಿಲ್ಲೆಗೆ ಆಗಮಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹಾಗೂ ಮಹದಾಯಿ ವಿಚಾರದಲ್ಲಿ ರಾಜ್ಯದಲ್ಲಿ ಸಾಕಷ್ಟು ಪ್ರತಿಭಟನೆ ನಡೆದಿದ್ದು, ರೈತರು ಶಾಂತಿಯುತವಾಗಿ ಹೋರಾಟ ನಡೆಸಬೇಕು.ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಯಿಂದ ಮಾತ್ರ ಕಾವೇರಿ ಜಲ ಹಾಗೂ ಮಹದಾಯಿ ವಿವಾದವನ್ನು ಬಗೆಹರಿಸಬಹುದಾಗಿದೆ ಎಂದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನವದೆಹಲಿಯ ಶ್ರಮಶಕ್ತಿ ಭವನದಲ್ಲಿ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಮಹತ್ವದ ಸಭೆಯಿಂದ ರಾಜ್ಯದ ಜನತೆಗೆ ಶುಭ ಸುದ್ದಿ ತರಲಿ ಎಂದು ಹಾರೈಸಿದರು. 
 
ದಸರಾ ಉದ್ಘಾಟಕರಾಗಿ ಬರುವಂತೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿದಾಗ ನನಗೆ ಆಶ್ಚರ್ಯವಾಗಿತ್ತು. ಮೊದಲ ಬಾರಿ ದಸರಾ ಉದ್ಘಾಟಟಕರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದು ನಾಡೋಜ ಚೆನ್ನವೀರ ಕಣವಿ ಸಂತಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments