Publish Date: Wed, 29 Nov 2017 (10:30 IST)
Updated Date: Wed, 29 Nov 2017 (10:33 IST)
ಬೆಂಗಳೂರು: ಗುಜರಾತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ತವರು ನಗರಕ್ಕೆ ಬಂದು ಆಗಾಗ ರ್ಯಾಲಿ ನಡೆಸುತ್ತಿದ್ದರೂ ಕೇಳಲು ಜನರೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಮೋದಿ ರ್ಯಾಲಿಯಲ್ಲಿ ಜನಸಂಖ್ಯೆ ಕಡಿಮೆಯಿತ್ತು ಎಂದು ವರದಿಗಳು ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ರೀತಿ ಟೀಕೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರ್ಯಾಲಿಯಲ್ಲಿ ಕಡಿಮೆ ಜನ ಬಂದಿರುವುದೇ ಗುಜರಾತ್ ನಲ್ಲಿ ಮೋದಿ ಅಲೆ ಕಡಿಮೆಯಾಗಿರುವುದಕ್ಕೆ ಸಾಕ್ಷಿ. ಈ ಬಾರಿ ಬಿಜೆಪಿಗೆ ಗುಜರಾತ್ ಚುನಾವಣೆಯಲ್ಲಿ ಸೋಲು ಖಚಿತ ಎಂದು ಸಿಎಂ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ