Webdunia - Bharat's app for daily news and videos

Install App

ಅಂಬಾನಿ, ಅದಾನಿಯಿಂದ ಎಷ್ಟು ಹಣ ತೆಗೆದುಕೊಂಡಿದ್ದೀರಿ ಎಂದು ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಮೋದಿ

Krishnaveni K
ಬುಧವಾರ, 8 ಮೇ 2024 (13:02 IST)
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಅಂಬಾನಿ ಅದಾನಿಯಿಂದ ಎಷ್ಟು ಕಪ್ಪು ಹಣ ತೆಗೆದುಕೊಂಡಿರಿ ಎಂದು ವ್ಯಂಗ್ಯ ಮಾಡಿದ್ದಾರೆ.

ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವಾಗಲೆಲ್ಲಾ ರಾಹುಲ್ ಗಾಂಧಿ ಉದ್ಯಮಿಗಳಾದ ಅಂಬಾನಿ ಮತ್ತು ಅದಾನಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ, ಅವರ ಸಾಲ ಮನ್ನಾ ಮಾಡಿದ್ದಾರೆ ಎಂದೆಲ್ಲಾ ಆರೋಪ ಹೊರಿಸುತ್ತಾರೆ. ಆದರೆ ಇತ್ತೀಚೆಗೆ ಆ ವಿಚಾರವನ್ನುಹೇಳಿಲ್ಲ.

ಹೀಗಾಗಿ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಈ ರೀತಿ ಟಾಂಗ್ ಕೊಟ್ಟಿದ್ದಾರೆ. ಚುನಾವಣೆ ಘೋಷಿಸುತ್ತಿದ್ದಂತೇ ರಾಹುಲ್ ಗಾಂಧಿ ಇಬ್ಬರು ಉದ್ಯಮಿಗಳ ಜಪ ಮಾಡುವುದನ್ನು ನಿಲ್ಲಿಸಿದ್ದು ಯಾಕೆ? ಈವತ್ತು ತೆಲಂಗಾಣದಿಂದ ಒಂದು ಪ್ರಶ್ನೆ ಮಾಡಲು ಬಯಸುತ್ತೇನೆ. ರಾತ್ರೋ ರಾತ್ರಿ ಅಂಬಾನಿ, ಅದಾನಿಯನ್ನು ಬಯ್ಯುವುದನ್ನು ನಿಲ್ಲಿಸಿದ್ದಾರೆ ಎಂದರೆ ಏನೋ ಇರಬೇಕು. ಯಾವುದೋ ಕಳ್ಳ ಮಾಲು ಟೆಂಪೋದೊಳಗೆ ಬಂದಿರಬೇಕು’ ಎಂದು ವ್ಯಂಗ್ಯ ಮಾಡಿದ್ದಾರೆ.

ಇಂದು ತೆಲಂಗಾಣದ ಸಿರಿಸಲ್ಲ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದಾರೆ. ಇದಕ್ಕೆ ಮೊದಲು ಅವರು ವೇಮುಲವಾಡದ ರಾಜನ್ನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮೋದಿ ಜೊತೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಾ ಇಂದು ತೆಲಂಗಾಣದಲ್ಲಿ ಪ್ರಚಾರ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments