Publish Date: Mon, 29 Apr 2024 (10:33 IST)
Updated Date: Mon, 29 Apr 2024 (10:36 IST)
ಬಾಗಲಕೋಟೆ: ರಾಜ್ಯದಲ್ಲಿ ಕೊನೆಯ ಹಂತದ ಲೋಕಸಭೆ ಚುನಾವಣೆಗೆ ಪ್ರಚಾರ ಬಿರುಸುಗೊಂಡಿದ್ದು ಇಂದು ಎರಡನೇ ದಿನ ಪ್ರಧಾನಿ ಮೋದಿ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ.
ನಿನ್ನೆ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಿನ್ನೆಯ ಸಮಾವೇಶದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಅಭ್ಯರ್ಥಿಗಳ ಪರವಾಗಿ ಮೋದಿ ಪ್ರಚಾರ ಮಾಡಿದ್ದರು.
ಇಂದಿನ ದಿನವೂ ಮೋದಿ ಪ್ರಚಾರ ಮುಂದುವರಿಯಲಿದೆ. ಇಂದು ಹೊಸಪೇಟೆಯಿಂದ ಬಾಗಲಕೋಟೆಗೆ ಆಗಮಿಸಲಿದ್ದಾರೆ. ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯ ಮೈದಾನದಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಮೋದಿ ಇಲ್ಲಿಗೆ ಆಗಮಿಸಲಿದ್ದಾರೆ.
ಅದಾದ ಬಳಿಕ ಮಧ್ಯಾಹ್ನ 1.05 ಕ್ಕೆ ಬಾಗಲಕೋಟೆಯಿಂದ ಮಹಾರಾಷ್ಟ್ರದ ಸೊಲ್ಲಾಪುರದ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯದಲ್ಲಿ ಎರಡು ದಿನಗಳ ಕಾಲ ನಿರಂತರ ಚುನಾವಣಾ ಪ್ರಚಾರಕ್ಕಾಗಿ ಮೋದಿ ಮೊನ್ನೆ ರಾತ್ರಿಯೇ ಬೆಳಗಾವಿಗೆ ಬಂದಿಳಿದಿದ್ದರು. ನಿನ್ನೆ ಬೆಳಗಾವಿಯಲ್ಲಿ ಅಬ್ಬರದ ಪ್ರಚಾರ ನಡೆಸಿದ್ದರು. ಇಂದು ಬೆಳಿಗ್ಗೆಯಿಂದ ಮಧ‍್ಯಾಹ್ನದವರೆಗೂ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.