ರಾಜ್ಯದ ಸಹಕಾರಿ ಸಾಧಕರೊಂದಿಗೆ ಪ್ರಧಾನಿ ಮೋದಿ ಸಂವಾದ

Webdunia
ಭಾನುವಾರ, 9 ಆಗಸ್ಟ್ 2020 (18:31 IST)
ರಾಜ್ಯದ ಸಹಕಾರಿ ಸಾಧಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ.

ಹಾಸನ‌ ಜಿಲ್ಲೆಯ ಉಗಿನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕಿಂದು ಅವಿಸ್ಮರಣೀಯ ದಿನ.

ದೇಶದ ಪ್ರಧಾನಿ ನರೇಂದ್ರ ಮೋದಿ, ಸಹಕಾರ ಸಂಘದದ ಪ್ರಗತಿ ಹಾಗೂ ರೈತ ಪರ ಕಾರ್ಯಗಳಿಗಾಗಿ ಸಂಸ್ಥೆಯನ್ನು ಗುರುತಿಸಿ ಅದರ ಪ್ರತಿನಿಧಿಗಳೊಂದಿಗೆ ನೇರ ವಿಡಿಯೋ ಸಂವಾದ ಮಾಡಿದ್ದಾರೆ.  
ಆತ್ಮ ‌ನಿರ್ಭರ್ ಅನ್ನದಾತ  ಕುರಿತ ನೇರ ಟಿ.ವಿ. ಸಂವಾದದಲ್ಲಿ ಉಗಿನೆ ಪಂಚಾಯತ್ ನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವೇಗೌಡ ಅವರೊಂದಿಗೆ ಮಾತಾನಡಿದರು. ಇದು ಇಡೀ ದೇಶದ ಗಮನ ಸೆಳೆದಿದೆ.

ಭಾಷಾಂತರಕಾರರ ನೆರವಿನೊಂದಿಗೆ ಬಸವೇಗೌಡ ಅವರೊಂದಿಗೆ ಹಿಂದಿಯಲ್ಲಿ  ಮಾತನಾಡಿದ ಪ್ರಧಾನಿ ಸಂಸ್ಥೆಯ ಪ್ರಾರಂಭ, ಬೆಳವಣಿಗೆ, ಸಾಧನೆ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶದ ರೈತರಿಗೆ  17,500 ಕೋಟಿ ರೂ ಮೊತ್ತದ ಕಿಸಾನ್ ಉಡುಗೊರೆ ನೀಡಿದ್ದ  ಸಂದರ್ಭದಲ್ಲಿ ನಡೆಸಿದ ವಿಡಿಯೋ ಸಂವಾದದ ಜಿಲ್ಲೆಯ ರೈತರ ಕೃಷಿ ಸಂಬಂಧಿಸಿದ ವಿಷಯಗಳು, ಸಮಸ್ಯೆಗಳನ್ನು ಆಲಿಸಿದ್ದು ವಿಶೇಷವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕದಲ್ಲಿ ಭಾರತದ ಮತ್ತೊಂದು ಪ್ರತಿಭಾನ್ವಿತ ವಿದ್ಯಾರ್ಥಿ ಸಾವು: ಆರು ದಿನಗಳ ಬಳಿಕ ಕರ್ನಾಟಕದ ಸಾಕೇತ್ ಶವ ಪತ್ತೆ

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರಹ್ಮಾನ್ ಪ್ರಮಾಣವಚನ: ಪ್ರಧಾನಿ ನರೇಂದ್ರ ಮೋದಿಗೂ ಬಂತು ಆಹ್ವಾನ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ಮುಂದಿನ ಸುದ್ದಿ
Show comments