Publish Date: Fri, 03 Jan 2020 (13:58 IST)
Updated Date: Fri, 03 Jan 2020 (14:00 IST)
ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರೋದು ಕೊಳಕು ರಾಜಕೀಯ ಭಾಷಣ.
ಹೀಗಂತ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಿದ್ದಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದು ಸ್ವಾಮೀಜಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಆ ವೇಳೆ ಅವರು ಮಠದ ಮಕ್ಕಳನ್ನು ಉದ್ದೇಶಿಸಿ ಭಾಷಣ ಮಾಡಿದ್ದರು.
ಭಾಷಣದಲ್ಲಿ ಕಾಂಗ್ರೆಸ್ ಹೆಸರು ಪ್ರಸ್ತಾಪಿಸದೆ ಟೀಕಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಪ್ರಸ್ತಾಪಿಸಿ ಭಾಷಣ ಮಾಡಿದ್ದಾರೆ. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ಧಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಗೌರವದ ಸ್ಥಾನವಿದೆ.
ಈ ಕಾರಣಕ್ಕಾಗಿಯೇ ಅದು ಸರ್ವರು ಭಕ್ತಿಯಿಂದ ನಮಿಸುವ ಕ್ಷೇತ್ರವಾಗಿದೆ. ಅಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯ ಭಾಷಣ ಮಾಡಿದ ಪ್ರಧಾನಿ ಮೋದಿಯವರೇ ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಕಿಡಿಕಾರಿದ್ದಾರೆ.