Select Your Language

Notifications

webdunia
webdunia
webdunia
webdunia

ನಾಳೆ, ನಾಡಿದ್ದು ಉತ್ತರ ಕರ್ನಾಟಕದಲ್ಲಿ ಮೋದಿ-ಸಿದ್ದರಾಮಯ್ಯ ಜಟಾಪಟಿ

PM Modi
ಬೆಳಗಾವಿ: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಪ್ರಚಾರದ ಅಬ್ಬರ ಜೋರಾಗಿದೆ. ನಾಳೆ ಮತ್ತು ನಾಡಿದ್ದು ಪ್ರಧಾನಿ ಮೋದಿ ಉತ್ತರ ಕರ್ನಾಟಕದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ನಾಳೆ ಬೆಳಗಾವಿಯಲ್ಲಿ ಒಂದೆಡೆ ಪ್ರಧಾನಿ ಮೋದಿ ಮತ್ತು ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಪ್ರಚಾರ ಕಣದಲ್ಲಿ ಅಬ್ಬರಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಈ ವೇಳೆ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಿರಿರಲಿದ್ದಾರೆ.

ವಿಶೇಷವೆಂದರೆ ಇದೇ ದಿನ ಸಿಎಂ ಸಿದ್ದರಾಮಯ್ಯ ಕೂಡಾ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಚಿಕ್ಕೋಡಿಯ ಉಗಾರ್ ಖರ್ದ್, ಬೆಳಗಾವಿಯ ಯರಗಟ್ಟಿಯಲ್ಲಿ ಸಮಾವೇಶದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಬೆಳಗಾವಿ ಈ ಬಾರಿ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಇಲ್ಲಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಿದ್ದಾರೆ.  ಇಂದೇ ಪ್ರಧಾನಿ ಮೋದಿ ಬೆಳಗಾವಿಗೆ ಬಂದಿಳಿಯಲಿದ್ದು, ನಾಳೆ ಪ್ರಚಾರ ನಡೆಸಿ ಸೋಮವಾರ ಹೊಸಪೇಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಪ್ತನ ಮನೆಯಿಂದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ವಿರುದ್ಧ ಎಫ್ ಐಆರ್