Publish Date: Wed, 09 May 2018 (11:04 IST)
Updated Date: Wed, 09 May 2018 (11:05 IST)
ಕೋಲಾರ: ಬಂಗಾರಪೇಟೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.
ಇಂದು ಕೋಲಾರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಪ್ರಧಾನಿ ಮೋದಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದರು.
‘ಚಿನ್ನದ ನಾಡಿನ ನನ್ನ ಬಂಧು ಭಗಿನಿಯರೇ, ಇಲ್ಲಿನ ಕಾರ್ಯಕರ್ತರೇ, ಅಭ್ಯರ್ಥಿಗಳೇ ಎಲ್ಲರಿಗೂ ನನ್ನ ನಮನಗಳು’ ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ ಭಾಷಣ ಆರಂಭಿಸಿದರು. ಇದುವರೆಗೆ ನಡೆದ ಪ್ರಚಾರ ಸಭೆಗಳಲ್ಲೆಲ್ಲಾ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ ಕನ್ನಡದಲ್ಲೇ ಮುಕ್ತಾಯ ಹಾಡಿದ್ದು ವಿಶೇಷವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.