Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಮೇ 10 ರಂದು ಬೆಂಗಳೂರಿಗೆ

PM Modi
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇದೇ ಮೇ 10 ರಂದು ಅಂದರೆ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್ ಗುರೂಜಿಯವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿದ್ದಾರೆ.

ರವಿಶಂಕರ್ ಗುರೂಜಿಯವರ 70 ನೇ ವರ್ಷದ ಜನ್ಮದಿನದ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸೆಂಟರ್ ನಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮೋದಿ ವಿಶೇಷ ಅತಿಯಾಗಿ ಆಗಮಿಸಲಿದ್ದಾರೆ.

ಮೇ 13 ರಂದು ರವಿಶಂಕರ್ ಗುರೂಜಿಯವರ 70 ನೇ ಜನ್ಮದಿನವಾಗಿದೆ. ಒಂದೆಡೆ ಗುರೂಜಿ ಜನ್ಮದಿನವಾಗಿದ್ದರೆ ಮತ್ತೊಂದೆಡೆ ಆರ್ಟ್ ಆಫ್ ಲಿವಿಂಗ್ ಸೆಂಟರ್ ಗೆ 45 ನೇ ವರ್ಷದ ಸಂಭ್ರಮವಾಗಿದೆ. ಈ ಹಿನ್ನಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮೇ 10 ರಂದು ಬೆಂಗಳೂರಿಗೆ ಬರುವ ಪ್ರಧಾನಿ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಹಲವು ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಸಂದರ್ಭದಲ್ಲಿ ದೇಶ, ವಿದೇಶಗಳಿಂದ ಸಾಕಷ್ಟು ಮಂದಿ ಆಗಮಿಸುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ಸೋತ ನಂತರವೂ ಸಿಎಂ ರಾಜೀನಾಮೆ ಕೊಡಲ್ಲ ಎಂದು ಹೇಳಲು ಸಾಧ್ಯವೇ