Publish Date: Tue, 17 Oct 2017 (09:43 IST)
Updated Date: Tue, 17 Oct 2017 (09:45 IST)
ಮಂಗಳೂರು: ಪ್ರಧಾನಿ ಮೋದಿ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಧರ್ಮಸ್ಥಳಕ್ಕೆ ಅಕ್ಟೋಬರ್ 29 ಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪಕ್ಕದ ಉಜಿರೆಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಗಳು ಬಂದಿವೆ. ಆದರೆ ಇದು ಇನ್ನೂ ಖಚಿತವಾಗಿಲ್ಲ.
ಜಿಲ್ಲಾಧಿಕಾರಿಗಳ ಕಚೇರಿಗೆ ಇನ್ನೂ ಈ ಬಗ್ಗೆ ಮಾಹಿತಿ ಬಂದಿಲ್ಲ. ಆದರೆ ಉಜಿರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸುತ್ತಿರುವುದು ಮೋದಿ ಭೇಟಿಗೆ ಮತ್ತಷ್ಟು ರೆಕ್ಕೆ ಪುಕ್ಕ ಬಂದಂತಾಗದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ