Select Your Language

Notifications

webdunia
webdunia
webdunia
webdunia

ಕಪ್ಪು ಡ್ರೆಸ್ ತೊಟ್ಟವರಿಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ

ಕಪ್ಪು ಡ್ರೆಸ್ ತೊಟ್ಟವರಿಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ
ಮಂಗಳೂರು , ಭಾನುವಾರ, 29 ಅಕ್ಟೋಬರ್ 2017 (09:25 IST)
ಮಂಗಳೂರು: ಇಂದು ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ಧರಿಸಿ ಬಂದವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

 
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಉಜಿರೆಯ ರತ್ನವರ್ಮ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಪ್ರವೇಶ ನೀಡುವುದಾಗಿ ಈ ಮೊದಲು ಹೇಳಲಾಗಿತ್ತು.

ಈಗಾಗಲೇ ಸಾರ್ವಜನಿಕರು ಮೈದಾನಕ್ಕೆ ಆಗಮಿಸುತ್ತಿದ್ದು, ಕಪ್ಪು ಬಟ್ಟೆ ಧರಿಸಿ ಬಂದವರಿಗೆ ಮುಂಜಾಗ್ರತಾ ಕ್ರಮವಾಗಿ ಪ್ರವೇಶ ನಿರಾಕರಿಸಲಾಗುತ್ತಿದೆ. ಕಪ್ಪು ಬಟ್ಟೆ ಧರಿಸಿ ಮೋದಿ ವಿರುದ್ಧ ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡು ಮೈದಾನಕ್ಕೆ ಪ್ರವೇಶಿಸದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ: ಧರ್ಮಸ್ಥಳ-ಉಜಿರೆಯಲ್ಲಿ ಹೈ ಅಲರ್ಟ್