ಪ್ರಧಾನಿ ಮೋದಿ ಚುನಾವಣೆ ವೇಳೆ ಅಷ್ಟೇ ಕರ್ನಾಟಕಕ್ಕೆ ಬರುತ್ತಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Sampriya
ಮಂಗಳವಾರ, 2 ಏಪ್ರಿಲ್ 2024 (19:15 IST)
Photo Courtesy Facebook
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರಗಾಲ ಬಂದಾಗಲೂ ಬಂದಿಲ್ಲ,  ತೆರಿಗೆಯಲ್ಲಿ ಅನ್ಯಾಯವಾದಾಗಲೂ ಬಂದಿಲ್ಲ. ಚುನಾವಣೆ ಬಂದಾಗ ಮೋದಿ ಅವರು ಮೇಲಿಂದ ಮೇಲೆ ಬರ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟೀಕಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 ನಮ್ಮ ನಾಡಿಗೆ ಪ್ರವಾಹ ಬಂದಾಗ @narendramodi
 ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ - ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ @BJP4Karnataka
. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ @BJP4India
 ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. 3/4<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿಯಿಂದ ಮಹಾಸಂಪರ್ಕ ಅಭಿಯಾನ, 1 ಕೋಟಿ ಮನೆ ತಲುಪಲಿದ್ದೇವೆ: ಬಿವೈ ವಿಜಯೇಂದ್ರ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments