Select Your Language

Notifications

webdunia
webdunia
webdunia
webdunia

ಜೂನ್‌ 21ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

pm modi mysore yoga ಯೋಗ ಮೈಸೂರು ಪ್ರಧಾನಿ ಮೋದಿ
bengaluru , ಸೋಮವಾರ, 30 ಮೇ 2022 (15:25 IST)

ಪ್ರಧಾನಿ ನರೇಂದ್ರ ಮೋದಿ ಜೂನ್‌ 21ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಜೊತೆ ಸಂವಾದ ನಡೆಸಿದ್ದು, ಕಾರ್ಯಕ್ರಮಗಳ ವಿವರ ಹಾಗೂ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ್ದಾರೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಿದ್ದಾರೆ ಎಂದು ತಿಳಿಸಿದ್ದಾರೆ.

ಜೂನ್ ೨೧ ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ ಯೋಗ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಪ್ರಧಾನಿಗಳ ಜತೆ ಮಾಹಿತಿ ನೀಡಲಾಗಿದೆ ಎಂದರು.

ಸಭೆಯಲ್ಲಿ ಕೇಂದ್ರ ಆಯುಷ್ ಸಚಿವರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ ಧಾಮ್ ಯಾತ್ರೆಯ ನಿಯಮಗಳು ಬದಲು ?