ಧಾರವಾಡ : ಮುಂದಿನ ವರ್ಷ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 3-4 ಬಾರಿ ಬರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಹಿಂದೆ ನಿರ್ಮಾಣವಾಗುತ್ತಿರುವ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಿದ ಜೋಶಿ ಪರಿಶೀಲನೆ ನಡೆಸಿ, ಕಟ್ಟಡ ಕಾಮಗಾರಿ ಮುಕ್ತಾಯದ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆಗೆ ಬರಲಿದ್ದಾರೆ. ಜನವರಿ 1ನೇ ತಾರೀಖಿಗೆ ಉದ್ಘಾಟನೆ ಮಾಡಬೇಕು ಎಂಬ ಯೋಜನೆಯಿದೆ. ಕಟ್ಟಡ ತಯಾರಾದರೆ ಅದೇ ದಿನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.