Select Your Language

Notifications

webdunia
webdunia
webdunia
webdunia

ಸಾಲ ಮನ್ನಾ ಮಾಡಿದ್ದೇನೆ, ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ಸಿಎಂ

ಸಾಲ ಮನ್ನಾ ಮಾಡಿದ್ದೇನೆ, ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಿ: ಬಿಎಸ್‌ವೈಗೆ ಸಿಎಂ
ಚನ್ನರಾಯಪಟ್ಟಣ , ಶನಿವಾರ, 22 ಜುಲೈ 2017 (18:55 IST)
ರಾಜ್ಯದ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಾ ಪ್ರಧಾನಿ ಮೂಗು ಹಿಡಿದು ಸಾಲ ಮನ್ನಾ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ಪ್ರಧಾನಿ ಮೋದಿ ಕೂಡಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
 
ರೈತರ ಪರವಾಗಿ ಹೇಳಿಕೆಗಳನ್ನು ನೀಡುವ ಯಡಿಯೂರಪ್ಪ ಅವರಿಗೆ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಪ್ರಧಾನಿ ಅವರ ಬಳಿಗೆ ತೆರಳಿ ರೈತರ ಸಾಲ ಮನ್ನಾ ಮಾಡಿಸಿಕೊಂಡು ಬರಲಿ ಎಂದು ಗುಡುಗಿದರು.
 
ಏನೂ ಮಾಡಲು ಆಗದವರು ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಬಿಎಸ್‌ವೈಗೆ ತಾಕತ್ತಿದ್ರೆ ಪ್ರಧಾನಿಯವರಿಂದ ಸಾಲ ಮನ್ನಾ ಮಾಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು