Select Your Language

Notifications

webdunia
webdunia
webdunia
webdunia

ಮಹಾದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ತಿಕೆ ವಹಿಸಲಿ– ಎಸ್.ಆರ್.ಪಾಟೀಲ

ಮಹಾದಾಯಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ತಿಕೆ ವಹಿಸಲಿ– ಎಸ್.ಆರ್.ಪಾಟೀಲ
ಬೆಂಗಳೂರು , ಬುಧವಾರ, 27 ಡಿಸೆಂಬರ್ 2017 (15:22 IST)
ಮಹಾದಾಯಿ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಸ್ತಿಕೆ ವಹಿಸಬೇಕು ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್.ಪಾಟೀಲ್ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಿದರೆ ನೀರು ಬರಲು
ಸಾಧ್ಯವಿಲ್ಲ. ರಾಜಕಾರಣ ಬಿಟ್ಟು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವಾರು ಬಾರಿ ಗೋವಾ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಧಾನಿಯವರ ಬಳಿಗೆ ಸರ್ವಪಕ್ಷ ನಿಯೋಗ ತೆರಳಿ ಮನವಿ ಮಾಡಲಾಗಿದೆ. ಮೂರು ರಾಜ್ಯಗಳ ವಿವಾದ ಬಗೆಹರಿಸಲು ಮುಖ್ಯಮಂತ್ರಿಗಳ ಸಭೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ನಿಗದಿಪಡಿಸಿದ್ದರು. ಆದರೆ ಗೋವಾ ಮುಖ್ಯಮಂತ್ರಿ ಸಭೆಗೆ ಬರಲಿಲ್ಲ. ಹೀಗಾಗಿ ನಮ್ಮ ಪ್ರಯತ್ನ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿಯವರು ಈ ವಿವಾದವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಬಿಜೆಪಿಯವರು ಪ್ರತಿಭಟನೆ ಮಾಡಿದ್ದಾರೆ. ಮಹಾದಾಯಿ ವಿವಾದಕ್ಕೆ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ. ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿತಿಕೆ ವಹಿಸಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರೋಮ್ಯಾನ್ಸ್‌ಗೆ ಒಪ್ಪದಕ್ಕೆ ಕೋಪಗೊಂಡು ಅಪ್ರಾಪ್ತ ಬಾಲಕ ಮಾಡಿದ್ದೇನು ಗೊತ್ತಾ?