Publish Date: Fri, 16 Jun 2023 (19:01 IST)
Updated Date: Fri, 16 Jun 2023 (20:15 IST)
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ವರದಿಯನ್ನು ದೆಹಲಿ ಪೊಲೀಸರು ಕೋರ್ಟ್‌ಗೆ ಸಲ್ಲಿಸಿದ್ದಾರೆ. WFI ಮುಖ್ಯಸ್ಥ ಬ್ರಿಜ್ ಭೂಷಣ್ಶರಣ ಸಿಂಗ್ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಅವರ ವಿರುದ್ಧ ಯಾವುದೇ ಸಾಕ್ಷಿಗಳು ಇಲ್ಲ. ಪ್ರಕರಣದಲ್ಲಿ ಯಾವುದೇ ಸಹಕಾರಿ ಸಾಕ್ಷ್ಯಗಳಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದತಿ ವರದಿಯನ್ನು ಪಟಿಯಾಲ ಹೌಸ್ ಕೋರ್ಟ್‌ಗೆ ಸಲ್ಲಿಸಿದ್ದಾರೆ. ಜುಲೈ 4ಕ್ಕೆ ಇದರ ಮುಂದಿನ ವಿಚಾರಣೆ ನಡೆಸಲಿದೆ. ಯಾವುದೇ ದೃಢೀಕರಿಸುವ ಪುರಾವೆಗಳು ಕಂಡುಬರದ ಸಂದರ್ಭಗಳಲ್ಲಿ ರದ್ದತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.