Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಬಾಲಾಕಿಯ ಮೇಲೆ ಲೈಂಗಿಕ ದೌರ್ಜನ್ಯ ,

webdunia
ಶನಿವಾರ, 24 ಸೆಪ್ಟಂಬರ್ 2022 (16:20 IST)

ಕಸಬಾ ಹೋಬಳಿಯ ಗೊಲ್ಲರಹಟ್ಟಿ ಗ್ರಾಮದ ಅಪ್ರಾಪ್ತ ವಯಸ್ಕ ಬಾಲಕಿಯು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು, ಸುಮಾರು ಆರು ತಿಂಗಳಿಂದ ಕಾಲೇಜಿಗೆ ಹೋಗುವುದನ್ನು ನಿಲ್ಲಿಸಿ ತನ್ನ ತಂದೆ- ತಾಯಿಯ ಜತೆ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.

ಇತ್ತಿಚಿಗೆ ಬಾಲಕಿಯು‌ ತಲೆನೋವು ಮತ್ತು ಜ್ವರದಿಂದ ಬಳಲುತ್ತಿದ್ದು, ಅಜ್ಜಿಯು ಮೊಮ್ಮಗಳನ್ನು ವಿಚಾರಿಸಿದಾಗ, ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿದಾಗ ಮೂರುವರೆ ತಿಂಗಳ ಗರ್ಭಿಣಿ ಎಂದು ತಿಳಿಸಿದ್ದಾರೆ.

ನೀನು ಗರ್ಭಿಣಿಯಾಗಲು ಯಾರು ಕಾರಣ ಎಂದು‌ ಕೇಳಿದಾಗ, ಸುಮಾರು ಆರು‌ ತಿಂಗಳ ಹಿಂದೆ ಮನೋಜ್‌ ಎಂಬುವನು ಪೋನ್ ಮೂಲಕ ಪರಿಚಯವಾಗಿ, ಆಗಾಗ್ಗೆ ಮಾತನಾಡುತ್ತಿದ್ದ, ನಾಲ್ಕು ತಿಂಗಳ ಹಿಂದೆ ಭೇಟಿ ಯಾಗುವಂತೆ ಹೇಳಿದ್ದ. ತೋಟದ ಹತ್ತಿರ ಬಂದು, ಪಕ್ಕದಲ್ಲಿದ್ದ ಹಳ್ಳದೊಳಗೆ ಕರೆದು ಕೊಂಡು ಹೋಗಿ ಬಲವಂತ ಮಾಡಿದ್ದು, ‌ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನಗೊಂದು ಗತಿ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಬೈಲಮ್ಮ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಅಯಕ್ಟ್ ಅಡಿ ಪ್ರಕರಣ ದಾಖಲಾಗಿದ್ದು ಸಿಪಿಐ ಸುರೇಶ್ ಹಾಗೂ ಪಿಎಸ್‌ಐ ನಾಗರಾಜು.ಬಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಆರೋಪಿಯನ್ನು‌ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆ ವರ್ಷದ ನಂತರ ಜ್ಯಾತಿ ಕ್ಯಾತೆ