Webdunia - Bharat's app for daily news and videos

Install App

ಸಾಮೂಹಿಕ ಅತ್ಯಾಚಾರಕ್ಕೆ ಪೊಲೀಸರೇ ನೈತಿಕ ಹೊಣೆ: ಕಾಂಗ್ರೆಸ್ ಸಮಿತಿ

Webdunia
ಬುಧವಾರ, 8 ಸೆಪ್ಟಂಬರ್ 2021 (11:01 IST)
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಅಧ್ಯಯನ ನಡೆಸಿರುವ ಕಾಂಗ್ರೆಸ್ ಸತ್ಯಶೋಧನಾ ಸಮಿತಿಯು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸ್ ಸಿಬ್ಬಂದಿ ಮತ್ತು ವಾಹನಗಳನ್ನು ನಿಯೋಜಿಸುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ದೂಷಿಸಿದೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ಸಮಿತಿಯು ಕೆಪಿಸಿಸಿಗೆ ಸಲ್ಲಿಸಿರುವ ತನ್ನ 31 ಪುಟಗಳ ವರದಿಯಲ್ಲಿ, ಸಾಮೂಹಿಕ ಅತ್ಯಾಚಾರ ಪ್ರಕರಣದ ನೈತಿಕ ಹೊಣೆಯನ್ನು ಪೊಲೀಸರು ಹೊತ್ತುಕೊಳ್ಳಬೇಕು ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.
ಪದೇ ಪದೆ ಪೊಲೀಸರ ವರ್ಗಾವಣೆ, ಪೊಲೀಸರು ಮತ್ತು ಇತರ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಹಾಗೂ ವಿಐಪಿ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸುವುದು ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದೂ ಅದು ಹೇಳಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಶಾಸಕರ ನಡುವೆ ಸಮನ್ವಯತೆ ಇಲ್ಲ ಎಂದು ಸಮಿತಿ ಹೇಳಿದೆ.
ಪೊಲೀಸರ ವಿರುದ್ಧ ಆರೋಪಗಳನ್ನು ಮಾಡಿರುವ ನಾಗರಿಕರು, ಪೊಲೀಸರು ಕಾನೂನು-ಸುವ್ಯವಸ್ಥೆ ಬದಲು ರಿಯಲ್ ಎಸ್ಟೇಟ್ ಮತ್ತು ನಾಗರಿಕ ವಿಷಯಗಳನ್ನು ಪರಿಹರಿಸುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದಿರುವುದಾಗಿ ಸಮಿತಿ ಹೇಳಿದೆ.
ಮುಂದಿನ ಐದು ತಿಂಗಳಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಲು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಲವನ್ನು ಬಲಪಡಿಸಲು ಸರ್ಕಾರವನ್ನು ಸಮಿತಿಯು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments