Publish Date: Wed, 07 Jan 2026 (17:35 IST)
Updated Date: Wed, 07 Jan 2026 (17:38 IST)
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ಮಾಡಿರೋ ದೌರ್ಜನ್ಯವೂ ರಾಜ್ಯವೇ ತಲೆ ತಗ್ಗಿಸುವಂತದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ಕಚೇರಿಯಲ್ಲಿ ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕಾರ್ಯಕರ್ತೆ SIR ಮ್ಯಾಪಿಂಗ್ ಮಾಡೋ ಸಮಯದಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಹಲ್ಲೆ ಮಾಡಿದ್ದಾರೆ. ಇನ್ನೂ ಈ ಬಳಿಕ ಕಾಂಗ್ರೆಸ್‌ನವರೇ ದೂರನ್ನು ನೀಡಿದ್ದಾರೆ.
ಪೊಲೀಸರು ಕಾಂಗ್ರೆಸ್ ಅವರ ದೂರಿನ ಹಿನ್ನೆಲೆ ಮಹಿಳೆ ಮೇಲೆ ದೌರ್ಜನ್ಯ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತೆ ಸುಜಾತ ದಲಿತ ಮಹಿಳೆ. ಅವರನ್ನ ವಿವಸ್ತ್ರಗೊಳಿಸಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿ ಆಗಿವೆ. ಕಾಂಗ್ರೆಸ್ ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಾ ಇದ್ದಾರೆ. ಈ ಘಟನೆ ಖಂಡಿಸುತ್ತೇನೆ. ಅಯೋಗ್ಯ ಅಧಿಕಾರಿಗಳನ್ನ ಗೃಹ ಸಚಿವರು ಕೂಡಲೇ ಅಮಾನತು ಮಾಡಬೇಕೆಂದರು.
ಪೊಲೀಸರ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ 140 ಶಾಸಕರು ಇದ್ದಾರೆ ಅಂತ ಅಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ. ಬಳ್ಳಾರಿ, ಹುಬ್ಬಳ್ಳಿ,