Webdunia - Bharat's app for daily news and videos

Install App

7.5 ಕೋಟಿ ಹಣ ದೋಚಿದ್ದ ನಾಲ್ವರು ಆರೋಪಿಗಳ ಬಂಧನ

Webdunia
ಮಂಗಳವಾರ, 16 ಮೇ 2017 (16:57 IST)
ಕಳೆದ ಮೂರು ದಿನಗಳ ಹಿಂದೆ 7.5 ಕೋಟಿ ಹಣ ದೋಚಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಕೊಡುಗು ಜಿಲ್ಲೆ ಸೋಮುವಾರಪೇಟೆ ತಾಲೂಕಿನ ಕಂಬಾರಗಡಿಗೆ ಗ್ರಾಮದಲ್ಲಿ ಬಂಧಿಸಿದ್ದಾರೆ.
 
ಮಂಗಳೂರಿನಿಂದ ಬೆಂಗಳೂರಿನ ಎಕ್ಸಿಸ್ ಬ್ಯಾಂಕ್‌ಗೆ ಹಣ ತರುವಾಗ ಆರೋಪಿಗಳು ಮಾರ್ಗಮಧ್ಯದಲ್ಲಿಯೇ ಹಣದೊಂದಿಗೆ ಪರಾರಿಯಾಗಿದ್ದರು. ಪೊಲೀಸರು ಮೂರು ದಿನಗಳಿಂದ ಆರೋಪಿಗಳ ಶೋಧಕಾರ್ಯದಲ್ಲಿ ತೊಡಗಿದ್ದರು. 
 
ಆರೋಪಿಗಳಿಂದ 6 ಕೋಟಿ 70 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಹಣವನ್ನು ಪುಷ್ಪಗಿರಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಡಗಿಸಿಟ್ಟಿದ್ದರು. ಹಣವನ್ನು ಮಂಗಳೂರಿನಿಂದ ಬೆಂಗಳೂರಿಗೆ ತರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
 
ವಾಹನದ ಚಾಲಕ ಕರಿಬಸಪ್ಪ, ಸೆಕ್ಯೂರಿಟಿ ಗಾರ್ಡ್‌ಗಳಾದ, ಪೂವಣ್ಣ, ಬಸಪ್ಪ, ಪರಶುರಾಮ್ ಶಾಹು, ಕೊಡಗಿನ ಕಾಶಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳ ಮೊಬೈಲ್‌ ನೆಟ್‌ವರ್ಕ್ ಆಧರಿಸಿ ಎಸಿಪಿ ವಾಲೆಂಟಿನ್ ಡಿಸೋಜಾ ನೇತೃತ್ವದ ತಂಡ  ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಬ್ಬ ಆರೋಪಿ ಭೀಮಯ್ಯನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments