Select Your Language

Notifications

webdunia
webdunia
webdunia
webdunia

ನಾಡಪಿಸ್ತೂಲ್ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ನಾಡಪಿಸ್ತೂಲ್ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಬೆಂಗಳೂರು , ಸೋಮವಾರ, 29 ಆಗಸ್ಟ್ 2016 (16:43 IST)
ನಾಡಪಿಸ್ತೂಲ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
 
ಯಲಹಂಕಾದ ಜೆಬಿ ರಸ್ತೆಯಲ್ಲಿ ಆರೋಪಿಗಳು ನಾಡಪಿಸ್ತೂಲ್ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳಾದ ರಾಮಕೇಶ್, ಹಂಸರಾಮ್ ಮತ್ತು ಬಂಟಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಆರೋಪಿಗಳು ಉತ್ತರ ಭಾರತದ ರಾಜ್ಯಗಳಿಂದ ನಾಡಪಿಸ್ತೂಲ್‌ಗಳನ್ನು ತಂದು ರಾಜ್ಯದಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಟಾರಣೆ ನಡೆಸಲಾಗುತ್ತಿತ್ತು ಮತ್ತಷ್ಟು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿವೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಂಸದೆ ರಮ್ಯ ಹೇಳಿಕೆಯಲ್ಲಿ ತಪ್ಪಿಲ್ಲ: ಸಿಎಂ ಸಿದ್ದರಾಮಯ್ಯ ಸಮರ್ಥನೆ