Select Your Language

Notifications

webdunia
webdunia
webdunia
webdunia

ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರ ಬಂಧನ

ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರ ಬಂಧನ
ಬೆಂಗಳೂರು , ಬುಧವಾರ, 7 ಡಿಸೆಂಬರ್ 2016 (13:38 IST)
ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
 
ಆರೋಪಿಗಳಾದ 49 ವರ್ಷ ವಯಸ್ಸಿನ ಶೇಖ್ ರಿಯಾಜುದ್ದೀನ್ ಮತ್ತು ದೇವಿದಾಸ್ ಎನ್ನುವ ಆರೋಪಿಗಳು ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಯುವತಿಯರನ್ನು ಸಂಪರ್ಕಿಸಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ನಂತರ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು ಎನ್ನಲಾಗಿದೆ. 
 
ಪಂಜಾಬ್‌ನಿಂದ ನಾಲ್ಕು ಮಹಿಳೆಯರನ್ನು ಕರೆತಂದ ಆರೋಪಿಗಳು ಅವರನ್ನು ಮನೆಯಲ್ಲಿ ಕೂಡಿಹಾಕಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಕಿರುಕುಳ ನೀಡುತ್ತಿದ್ದರು. ನಂತರ ಅವರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ನಗರದ ಆರ್.ಟಿ.ನಗರದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್ ಸುರಿದು ಪ್ರಿಯಕರನನ್ನೇ ಕೊಂದಿದ್ದ ಪ್ರೇಯಸಿ ಅರೆ